ಬೆಂಗಳೂರು: ಮನೆ ಕಳ್ಳತನ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಖದೀಮರನ್ನು ಬಂಧಿಸುವಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಜಯ್, ಮಂಜುನಾಥ್, ರಜೀಯಾ ಮತ್ತು ಬಾಬಾಜಾನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2.50 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಹಾಗೂ ಏಳು ಲಕ್ಷ ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಡಿವೈಎಸ್‍ಪಿ ನಜುಂಡೇಗೌಡ ಹಾಗೂ ಹೆಬ್ಬಗೋಡಿ ಪೊಲೀಸ್ ಠಾಣೆಯ ಜಗದೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ಖತರ್ನಾಕ್ ಖದೀಮರನ್ನು ಬಂಧಿಸಲಾಗಿದೆ. ಇನ್ನು ಬಂಧಿತರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ, ಬೆಳ್ಳಂದೂರು, ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು.