ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಶಿವಮೊಗ್ಗದಲ್ಲಿರೋ ಮನೆಗೆ ಮೊಟ್ಟೆ ತೂರಲು ಯತ್ನಿಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ, ನಿರುದ್ಯೋಗ, ಮಹದಾಯಿ ಇನ್ನಿತರ ಸಮಸ್ಯೆ ಬಗೆಹರಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆ ಅಂಗವಾಗಿ ಸಂಸದ ಬಿ ಎಸ್ ವೈ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಮುತ್ತಿಗೆ ಸಂದರ್ಭದಲ್ಲಿ ಕಾರ್ಯಕರ್ತರು ಮನೆಗೆ ಮೊಟ್ಟೆ ತೂರಲು ಸಿದ್ಧವಾಗಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಬಂಧಿಸಿದ್ದಾರೆ.
Advertisement
ರಂಗನಾಥ, ಪ್ರವೀಣ್, ಕಿರಣ್ ಸೇರಿ 35ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಈ ಸಂಬಂಧ ವಿನೋಬಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.