Districts
ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರಿಂದ ದಾಳಿ- 22 ಪುರುಷರ ಬಂಧನ, 7 ಮಹಿಳೆಯರ ರಕ್ಷಣೆ

ಮಂಡ್ಯ: ಆಕ್ರಮವಾಗಿ ಡಾಬಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 22 ಜನ ಪುರುಷರನ್ನು ಬಂಧಿಸಿ, 7 ಜನ ಮಹಿಳೆಯರನ್ನು ರಕ್ಷಿಸಿದ್ದಾರೆ.
ಈ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರೋ ಡಾಬಾದಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದಿದ್ದ ಮಂಡ್ಯ ಎಸ್ಪಿ ರಾಧಿಕಾ ಹಾಗು ಮೈಸೂರಿನ ಒಡನಾಡಿ ಸಹಯೋಗದೊಂದಿಗೆ ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯರನ್ನು ರಕ್ಷಿಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ 5 ಬೈಕ್, ಕಾರ್, ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಕಾರ್ಯಾಚರಣೆ ವೇಳೆ ಮಹಿಳೆಯರನ್ನು ಅಕ್ರಮವಾಗಿ ಕೂಡಿಡಲು ಕೊರೆಸಿದ್ದ ಸುರಂಗ ಕೂಡ ಪತ್ತೆಯಾಗಿದೆ. ಇನ್ನು 2008 ರಲ್ಲೂ ಇದೇ ಡಾಬಾ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕಲ್ಕತ್ತಾ, ಮುಂಬೈ ಮತ್ತು ಬಾಂಗ್ಲಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದರು.
ಘಟನೆ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
