ಗದಗ: ಹೈಟೆಕ್ ದರೋಡೆ ಗ್ಯಾಂಗ್ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗುವ ವೇಳೆ ಪೊಲೀಸರಿಂದ ಗುಂಡೇಟು ತಿಂದ ಘಟನೆ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಡಂಬಳ (Dambala) ಹಾಗೂ ಡೋಣಿ ಗ್ರಾಮದ ಮಧ್ಯೆ ನಡೆದಿದೆ.
ಆರೋಪಿ ಜಯಸಿಂಹ ಮೊಡಕೆರ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಎರಡು ಸುತ್ತು ಗುಂಡೇಟು ಹಾರಿಸಿದ್ದಾರೆ. ಇದನ್ನೂ ಓದಿ: ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ
ಈ ನಟೋರಿಯಸ್ ಗ್ಯಾಂಗ್ ಮೊಬೈಲ್ ಸಂಪರ್ಕ ಬಿಟ್ಟು ಇನ್ಸ್ಟಾದ ಮೂಲಕ ಸಂಪರ್ಕ ಹೊಂದಿದ್ದರು. ಕಳ್ಳತನ, ದರೋಡೆ ಮಾಡಿ ಮಾಹಿತಿ ಸಿಗದಂತೆ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನುಸುತ್ತಿದ್ದ ಗ್ಯಾಂಗ್‌ನನ್ನು ಬಂಧಿಸುವಲ್ಲಿ ಕೊನೆಗೂ ಗದಗ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾವಿ ಪತಿಯ ಫೋಟೋ ಹಂಚಿಕೊಂಡ ‘ಹುಡುಗರು’ ಚಿತ್ರದ ನಟಿ ಅಭಿನಯ
ಆರೋಪಿ ಮಂಜುನಾಥ ಮೊಡಕೆರ್, ರಮೇಶ್ ಮೊಡಕೆರ್ ಹಾಗೂ ಜಯಸಿಂಹ ಮೊಡಕೆರ್‌ರನ್ನು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆತರುತ್ತಿದ್ದರು. ಜಯಸಿಂಹ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಮುಂಡರಗಿ ಸಿಪಿಐ ಮಂಜುನಾಥ ಕುಸುಗಲ್ ಅವರು ಆರೋಪಿ ಜಯಸಿಂಹನ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ದರೋಡೆ, ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣದ ಮೋಸ್ಟ್ ವಾಟೆಂಡ್ ನಟೋರಿಯಸ್ ದರೋಡೆಕೋರ ಗ್ಯಾಂಗ್ ಇದಾಗಿತ್ತು. ಇದನ್ನೂ ಓದಿ: 300 ಕಿಮೀ ವೇಗದಲ್ಲಿ ಚಾಲನೆ; ಲ್ಯಾಂಬೊರ್ಗಿನಿ ಕಾರು ಹತ್ತಿಸಿ ಫುಟ್‌ಪಾತ್‌ನಲ್ಲಿದ್ದ ಕಾರ್ಮಿಕರಿಗೆ ಗಾಯ!
ಗಾಯಾಳು ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿ ಜಯಸಿಂಹ ಮೊಡಕೆರ್ ಹಾಗೂ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಆರೋಗ್ಯ ವಿಚಾರಿಸಿದರು.