ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ (Shimla) ಅಕ್ರಮ ಮಸೀದಿ ವಿಚಾರವಾಗಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನ ಸ್ವರೂಪ ಪಡೆದುಕೊಂಡಿತು.
ಮಹಿಳೆಯರು ಸೇರಿದಂತೆ ಪ್ರತಿಭಟನಾಕಾರರು ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಪ್ರತಿಭಟನಾಕಾರರ ಗುಂಪು ಬ್ಯಾರಿಕೇಡ್‌ಗಳ ತೆಗೆದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು. ಈ ವೇಳೆ ಪೊಲೀಸರು ಜಲಫಿರಂಗಿ ಮತ್ತು ಲಘು ಲಾಠಿ ಪ್ರಹಾರ ನಡೆಸಿದರು. ಇದನ್ನೂ ಓದಿ: ವಿಶ್ವದ ಎಲ್ಲ ಸಾಧನಗಳಲ್ಲಿ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು: ಮೋದಿ
ಮಲೆನಾಡಿನ ನಗರದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಬುಧವಾರ ಶಿಮ್ಲಾದ ಧಲ್ಲಿ ಪ್ರದೇಶದಲ್ಲಿ ಜಮಾಯಿಸಿದರು. ಸಂಜೌಲಿ ಪ್ರದೇಶದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದರು.
ಇದನ್ನು ಹಿಂದೂ-ಮುಸ್ಲಿಂ ಸಮಸ್ಯೆಯನ್ನಾಗಿ ಮಾಡಲು ಬಿಜೆಪಿ ಬಯಸಿದೆ ಎಂದು ಹಿಮಾಚಲ ಪ್ರದೇಶ ಸಿಎಂ ನರೇಶ್ ಚೌಹಾಣ್ ಅವರ ಮಾಧ್ಯಮ ಸಲಹೆಗಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, ಅಕ್ರಮ ನಿರ್ಮಾಣದ ವಿರುದ್ಧ ರಾಜ್ಯವು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ರ‍್ಯಾಲಿ ವೇಳೆ ಸ್ಫೋಟ ಪ್ರಕರಣ – ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಬದಲಿಸಿದ ಪಾಟ್ನಾ ಹೈಕೋರ್ಟ್
ಶಿಮ್ಲಾದ ಧಲ್ಲಿ ಸುರಂಗ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸರು ಸಂಜೌಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.