ಜೋಧಪುರ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ವಿರುದ್ಧ ಜೋಧಪುರ ನಗರದ ಲೂಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಕರಣ್ ಜೋಹರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಾರ್ದಿಕ್ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೇವರಾಮ್ ಮೇಘವಾಲ್ ಎಂಬವರು ಲೂಣಿ ಠಾಣೆಯಲ್ಲಿ ಅಶ್ಲೀಲ ಹೇಳಿಕೆ, ಎಸ್‍ಸಿ, ಎಸ್‍ಟಿ ಕಾಯ್ದೆ ಅಡಿ ದೂರು ದಾಖಲಿಸಿದ್ದಾರೆ.
Advertisement
ಈ ಮೂವರು ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಅವಹೇಳನಕಾರಿ ಹೇಳಿಕೆ ಮತ್ತು ದೇಶದ ಗಣ್ಯವ್ಯಕ್ತಿಗಳಿಗೆ ಅವಮಾನಿಸಿದ್ದಾರೆ. ಸಂವಿಧಾನ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಳಗೊಂಡಂತೆ ಹಿರಿಯ ನಾಯಕರನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Advertisement
Advertisement
ದೂರಿನನ್ವಯ ತನಿಖೆ ನಡೆಸಿ, ಅವಶ್ಯವಿದ್ದರೆ ಹಾರ್ದಿಕ್, ರಾಹುಲ್ ಮತ್ತು ಕರಣ್ ಜೋಹರ್ ಅವರಿಗೆ ನೋಟಿಸ್ ನೀಡಲಾಗುತ್ತದೆ. ಎಂದು ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಬಂಶಿಲಾಲ್ ವೈಷ್ಣವ್ ತಿಳಿಸಿದ್ದಾರೆ.
Advertisement
ಸ್ತ್ರೀಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ಮಂಡಳಿ ಇಬ್ಬರು ಆಟಗಾರರನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಅಮಾನತು ಮಾಡಿತ್ತು. ನಿಷೇಧದ ಎರಡು ವಾರಗಳ ಬಳಿಕ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧದ ಅಮಾನತು ಆದೇಶ ರದ್ದು ಮಾಡುವಂತೆ ಬಿಸಿಸಿಐ ಆಡಳಿತ ಸಮಿತಿ (ಸಿಓಎ) ಆದೇಶ ನೀಡಿತ್ತು. ಸುಪ್ರೀಂ ಕೋರ್ಟ್ ನೇಮಿಸಿದ್ದ ಬಿಸಿಸಿಐ ಆಡಳಿತ ಮಂಡಳಿಯಲ್ಲಿರುವ ತಟಸ್ಥ ಸಲಹೆಗಾರ (ಅಮಿಕಸ್ ಕ್ಯೂರಿ) ಪಿಎಸ್ ನರಸಿಂಹ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಅಮಾನತು ಆದೇಶ ರದ್ದುಗೊಂಡಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv