ಹಾಸನ: ಕೊರೊನಾ ನಿಯಮಗಳನ್ನು ಮೀರಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸುಮಾರು 6 ಸಾವಿರ ಜನ ತೆರಳಿದ್ದ ಕೈ ನಾಯಕರ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿವೆ.
Advertisement
ಜನವರಿ 12 ರಂದು ಜಿಲ್ಲೆಯಿಂದ 6 ಸಾವಿರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು. ಪೊಲೀಸರು ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಿಸಿದ್ದು, ಹಾಸನ ನಗರ, ಬಡಾವಣೆ, ಪೆನ್ಷನ್ ಮೊಹಲ್ಲಾ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲೂಕಿನ ಠಾಣೆಗಳಲ್ಲಿ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ
Advertisement
Advertisement
ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಜನರನ್ನು ಸೇರಿಸಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ, ನಿರ್ಲಕ್ಷ್ಯ ವಹಿಸಿರುವ ಕಾರ್ಯಕರ್ತರನ್ನ ಕರೆದೊಯ್ದ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ
Advertisement
ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರು.