ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಕುಲ್‍ದೀಪ್ ಜೈನ್ (Kuldeep Kumar Jain Transfer) ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ (Anupam Agarwal) ಅವರನ್ನು ನೇಮಿಸಲಾಗಿದೆ. ಕೇವಲ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಡ್ರಗ್ಸ್ ಫ್ರೀ ಸಿಟಿ ಎಂಬ ಟಾಸ್ಕ್ ಹೊಂದಿದ್ದರು.
ಡ್ರಗ್ಸ್ ವಿರುದ್ಧ ಸಮರ ಸಾರಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದರು. ಮಟ್ಕಾ, ಜೂಜು ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಿದ್ದರು. ಇದೀಗ ಅವರ ವರ್ಗಾವಣೆ ಆದೇಶದಿಂದ ಡ್ರಗ್ಸ್ ಮಾಫಿಯಾ ಹಿಂದೆ ಬಿದ್ದಿದ್ದೇ ಮುಳುವಾಯಿತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ
Web Stories