– ಐಟಿ ಅಧಿಕಾರಿಗಳ ಜೊತೆ ಬೇರೆ ಯಾರಾದ್ರೂ ಇದ್ರಾ ಅನ್ನೋ ಬಗ್ಗೆಯೂ ತನಿಖೆ ಆಗ್ತಿದೆ: ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: ಸಿ.ಜೆ ರಾಯ್ (CJ Roy) ಶೂಟ್ ಮಾಡಿಕೊಂಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳ ಜೊತೆ ಯಾರ‍್ಯಾರು ಇದ್ರೂ ಅನ್ನೋದ್ರ ಬಗ್ಗೆಯೂ ತನಿಖೆ ಆಗ್ತಿದೆ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಮಾಹಿತಿ ನೀಡಿದರು.
ಐಟಿ ವಿಚಾರಣೆಗೆ ಬೇಸತ್ತ ಉದ್ಯಮಿ (Businessma) ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕುರಿತು ಮಾತನಾಡಿದ ಅವರು, ಕೇರಳ ಐಟಿ ಅಧಿಕಾರಿಗಳ ತಂಡ ಕಳೆದ ಮೂರು ದಿನಗಳಿಂದ ದಾಳಿ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಸಿ.ಜೆ ರಾಯ್ ಶೂಟ್ ಮಾಡಿಕೊಂಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3:15 ರ ಸುಮಾರಿನಲ್ಲಿ ಘಟನೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್ – 1 ಗಂಟೆ ಐಟಿ ವಿಚಾರಣೆ ಬಳಿಕ ಆತ್ಮಹತ್ಯೆ; ಆಗಿದ್ದೇನು?
ಕಾನ್ಫಿಡೆಂಟ್ ಗ್ರೂಪ್ (Confident Group) ನಿರ್ದೇಶಕರು ಘಟನೆ ಸಂಬಂಧ ದೂರು ಕೊಟ್ಟಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯಬೇಕಿದೆ ಎಂದರು. ಇದನ್ನೂ ಓದಿ: ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
ಘಟನೆ ಬಳಿಕ ಮೃತದೇಹವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶೂಟ್ ಮಾಡಿಕೊಂಡ ಗನ್ ಯಾವುದು? ಅನ್ನೋದ್ರ ಬಗ್ಗೆಯೂ ಸೋಕೋ ಮತ್ತು ಬ್ಯಾಲೆಸ್ಟಿಕ್ ಟೀಂ ನಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಐಟಿ ಅಧಿಕಾರಿಗಳ ಜೊತೆ ಬೇರೆ ಯಾರಾದ್ರೂ ಇದ್ರಾ ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದೇವೆ ಎಂದು ವಿವರಿಸಿದ್ರು.
ಆಗಿದ್ದೇನು?
ಸಿ.ಜೆ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಕಂಪನಿಯನ್ನ ಹುಟ್ಟುಹಾಕಿದ್ದರು. ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಸ್ತೂಲ್ನಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಒಂದು ಸುತ್ತು ಗುಂಡು ಹಾರಿಸಿಕೊಳ್ಳುತ್ತಿದ್ದಂತೆ ಗನ್ ಕಿತ್ತುಕೊಂಡಿರುವ ಐಟಿ ಅಧಿಕಾರಿಗಳು, ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಸಾವನ್ನಪ್ಪಿದ್ದು, ಹೆಚ್‌ಎಸ್‌ಆರ್ ಲೇಔಟ್ ನಾರಾಯಣ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಲಾಗಿದೆ.

