ಮಂಗಳೂರು: ಇತ್ತೀಚೆಗಷ್ಟೆ ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ವಿಟ್ಲದಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿದಂತೆ ಐವರ ತಂಡದಿಂದ ಅಪ್ತಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಈ ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಜೀವ ಬೆದರಿಕೆವೊಡ್ಡಿದ್ದಾರೆ. ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳಿಗೆ ನ್ಯಾಯಾಂಗ ಬಂಧನ
Advertisement
Advertisement
ಇಂದು ಆಶಾ ಕಾರ್ಯಕರ್ತೆಯರು ಮನೆಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Advertisement
ಕೆಲವು ದಿನಗಳ ಹಿಂದೆ ಕಾಲೇಜಿನ ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅತ್ಯಾಚಾರದ ವಿಡಿಯೋ ವೈರಲ್ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಸಿದ್ದ ಆರೋಪಿಗಳನ್ನು ನ್ಯಾಯಾಲಯದ ಮುಂದೇ ಹಾಜರು ಪಡಿಸಲಾಗಿತ್ತು. ಆರೋಪಿಗಳನ್ನು ಜು.18 ರ ವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿತ್ತು.