ಹುಬ್ಬಳ್ಳಿ: ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಮಾರಕಾಸ್ತ್ರಗಳಿಂದ ಬರ್ತ್ ಡೇ ಆಚರಣೆ ವೇಳೆ ಕೇಕ್ ಕಟ್ ಮಾಡುವುದು ಒಂದು ಟ್ರೆಂಡ್ ಆಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಗರದ ಕಾನೂನು ಸುವ್ಯವಸ್ಥೆಯ ಬಗ್ಗೆ ಟೀಕೆಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಈ ಕೆಟ್ಟ ಸಂಪ್ರದಾಯಕ್ಕೆ ಬ್ರೇಕ್ ಹಾಕಲು ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಲ್ವಾರ್ ನಿಂದ ಕೇಕ್ ಕತ್ತರಿಸಿದವ ಅರೆಸ್ಟ್
Advertisement
ಡಿಸಿಪಿಗಳಾದ ರೇಣುಕಾ ಸುಕುಮಾರ, ನ್ಯಾಮಗೌಡರ, ಎಸಿಪಿಗಳಾದ ಹೆಚ್.ಕೆ. ಪಠಾಣ್ ಹಾಗೂ ಎನ್.ಬಿ.ಸಕ್ರಿ ಸಾಥ್ ನೇತೃತ್ವದಲ್ಲಿ ನಗರದ ವಿವಿಧ ಪ್ರದೇಶಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ರೌಡಿಶೀಟರ್ ಗಳ ಮನೆಗಳನ್ನು ಪರಿಶೀಲನೆ ನಡೆಸಿದ್ದಾರೆ.
Advertisement
ಕೇಶ್ವಾಪೂರ, ಆರ್‍ಜಿಎಸ್ ಬಡಾವಣೆ, ಹೊಸೂರು, ಸೆಟ್ಲಮೆಂಟ್, ಸೇರಿದಂತೆ ಅನೇಕ ಕಡೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಓರ್ವ ರೌಡಿಶೀಟರ್ ಮನೆಯಲ್ಲಿ ಎರಡು ತಲ್ವಾರ್ ಪತ್ತೆಯಾಗಿದೆ. ಬಳಿಕ ಈ ಸಂಬಂಧ ಇಬ್ಬರು ರೌಡಿಗಳನ್ನು ಬಂಧಿಸಿದ್ದು, ಪತ್ತೆಯಾದ ತಲ್ವಾರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪೊಲೀಸರು ಮತ್ತೆ ಈ ರೀತಿ ಮಾಡಿದರೆ ಸೂಕ್ತ ಕ್ರಮತೆಗೆದುಕೊಳ್ಳುವುದಾಗಿ ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.