ಶಿವಮೊಗ್ಗ: ಕೆಲ ದಿನಗಳ ಹಿಂದೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ನಡೆದ ಗಲಭೆ ಹಿನ್ನೆಲೆ ನಗರದ ಎಸ್‍ಡಿಪಿಐ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Advertisement
ಶಿವಮೊಗ್ಗದ ಅಮೀರ್ ಅಹಮ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರ ಸಂಬಂಧ ನಡೆದ ಗಲಾಟೆ ವೇಳೆ ಪ್ರೇಮ್ ಸಿಂಗ್‍ಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು. ಈ ಪ್ರಕರಣ ಸಂಬಂಧ ಆರೋಪಿಗಳಾದ ತನ್ವೀರ್, ನದೀಮ್, ರೆಹಮಾನ್ ಹಾಗೂ ಜಬೀವುಲ್ಲಾ ಮನೆ ಮೇಲೆ ಸರ್ಚ್ ವಾರೆಂಟ್ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಎಸ್‍ಡಿಪಿಐ ಸಂಘಟನೆ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಎಸ್‍ಡಿಪಿಐ ಕಚೇರಿ ಮೇಲೂ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಇಬ್ಬರು ರೌಡಿಶೀಟರ್‌ಗಳು ಗಡೀಪಾರು
Advertisement
Advertisement
ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಕುಂಸಿ ಪಿಐ ಹರೀಶ್ ಪಟೇಲ್, ವಿ ನೋಬ ನಗರ ಪೊಲೀಸ್ ಠಾಣೆ ಪಿಐ ರವಿಕುಮಾರ್, ಸಂಚಾರಿ ಪೊಲೀಸ್ ಠಾಣೆಯ ಪಿಐ ಸಂತೋಷ್, ತುಂಗಾನಗರ ಪೊಲೀಸ್ ಠಾಣೆಯ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಹಾಡಹಗಲೇ ಬಾಲಕಿ ಕಿಡ್ನ್ಯಾಪ್‍ಗೆ ಯತ್ನ
Advertisement
ಘಟನೆ ಹಿನ್ನೆಲೆ:
ಆಗಸ್ಟ್ 15 ರಂದು ಶಿವಮೊಗ್ಗದ ಅಮೀರ್ ಅಹಮ್ಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುದರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಆದಾದ ಬಳಿಕ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು.