ಚಿಕ್ಕಮಗಳೂರು: ಕಳೆದ 17 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಸಂಚಾರಿ ಠಾಣೆಯ 30 ವರ್ಷದ ಪೇದೆ ಅನಿಲ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್ ಕುಮಾರ್ ಇಂದು ಮಧ್ಯಾಹ್ನ ಪೊಲೀಸ್ ಕ್ವಾರ್ಟರ್ಸ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್ ಕುಮಾರ್ ಆತ್ಮಹತ್ಯೆಗೆ ಶರಣಾಗುವ ಮುನ್ನ ಎರಡು ಪುಟಗಳ ಡೆತ್ ನೋಟ್ ಬರೆದಿದ್ದಾರೆ.
Advertisement
ಈ ಕುರಿತು ಮಾಹಿತಿ ಪಡೆದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಡೆತ್ ನೋಟ್ ವಶಕ್ಕೆ ಪಡೆದಿದ್ದಾರೆ. ಅನಿಲ್ ಕುಮಾರ್ 2009 ರಲ್ಲಿ ಸೇವೆಗೆ ಆಯ್ಕೆ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯೇ ಆತ್ಮಹತ್ಯೆ ಪ್ರಮುಖ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.