ಮೈಸೂರು: ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ಸಮಯದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.
ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೇದೆ. ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಟ್ಯಾಂಕರ್ ಹರಿದು ಬಾಲಕಿ ಸಾವು ಪ್ರಕರಣ – ಚಾಲಕ ರಖೀಬ್ ಅರೆಸ್ಟ್
- Advertisement 2
- Advertisement 3
ಪರಸಪ್ಪ ಅವರಿಗೆ ಒಂದೂವರೆ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಇದೀಗ ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
- Advertisement 4
ಉತ್ತರ ಕರ್ನಾಟಕ ಮೂಲದ ಪರಸಪ್ಪ ಅವರು ಮೈಸೂರಿನ ದೇವರಾಜ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು 2016 ನೇ ಬ್ಯಾಚ್ ನಲ್ಲಿ ಆಯ್ಕೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ನಜರ್ ಬಾದ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.