CrimeKalaburagiLatestMain Post

ಮದುವೆಗೆ 4 ದಿನ ಇರೋವಾಗ ರೈಲು ಹಳಿಯಲ್ಲಿ ಪೇದೆ ಮೃತದೇಹ ಪತ್ತೆ!

ಕಲಬುರಗಿ: ಮದುವೆಗೆ ಇನ್ನೂ ನಾಲ್ಕು ದಿನ ಇರುವಾಗಲೇ ತಾಲ್ಲೂಕಿನ ಸಾವಳಗಿ ಬಳಿಯ ರೈಲು ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ಮೃತದೇಹ ಪತ್ತೆಯಾಗಿದೆ.

ಶ್ರೀನಾಥ್ (25) ಶವವಾಗಿ ಪತ್ತೆಯಾದ ಕಾನ್‌ಸ್ಟೇಬಲ್‌. ಡಿ.1ರಂದು ಕಾನ್‌ಸ್ಟೇಬಲ್‌ ಶ್ರೀನಾಥ್‌ ವಿವಾಹ ನಿಶ್ಚಯವಾಗಿತ್ತು. ಮದುವೆಗೆ ನಾಲ್ಕು ದಿನ ಬಾಕಿ ಇರುವಾಗಲೇ ಈ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದ ನಿವಾಸಿಯಾಗಿದ್ದ ಶ್ರೀನಾಥ್‌, ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ

POLICE JEEP

ಇಂದು ಬೆಳಗ್ಗೆ ರೈಲು ಹಳಿ ಮೇಲೆ ಅವರ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ

Leave a Reply

Your email address will not be published.

Back to top button