ಕೋಲಾರ : ಕರ್ತವ್ಯ ನಿರತ ಪೊಲೀಸ್ ಮುಖ್ಯಪೇದೆಯೋರ್ವ (Police Constable) ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ರಾತ್ರಿ ಪಾಳಿಯ ಕೆಲಸಕ್ಕಾಗಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ (Police Station) ಕಾರ್ಯನಿರ್ವಹಿಸುತ್ತಿದ್ದ ಬಂಗಾರಪೇಟೆ ತಾಲೂಕಿನ ಕೆಸರನಹಳ್ಳಿ ಗ್ರಾಮದ ಸುರೇಶ್ (48) ಮೃತಪಟ್ಟ ಪೇದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು, ಹೃದಯಾಘಾತದಿಂದ ಮುಖ್ಯ ಪೊಲೀಸ್ ಪೇದೆ ಸುರೇಶ್ ಮೃತಪಟ್ಟಿದ್ದಾನೆ.
Advertisement
Advertisement
ಕಳೆದ ರಾತ್ರಿ ಎಂದಿನಂತೆ ರಾತ್ರಿ ಪಾಳಿಯ ಕೆಲಸಕ್ಕೆ ಹಾಜರಾಗಿದ್ದರು. ಆದರೆ 3 ಗಂಟೆ ಸುಮಾರಿಗೆ ನಿದ್ದೆ ಬರುವ ಹಾಗಿದೆ ಎಂದು ಸಹೋದ್ಯೋಗಿಗೆ ತಿಳಿಸಿ ಅಲ್ಲೇ ಠಾಣೆಯ ಕೋಣೆಯೊಂದರಲ್ಲಿ ಮಲಗಿದ್ದಾನೆ. ಆದ್ರೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಹೃದಯಾಘಾತವಾಗಿದ್ದು, ತಕ್ಷಣ ಪೊಲೀಸ್ ಪೇದೆಯನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ನಾಯಿ ಮರಿಗೆ ನೀರು ಕುಡಿಸಲು ಹೋದ ಯೋಧ ಅಪಘಾತದಲ್ಲಿ ಸಾವು- ಹುಟ್ಟೂರಿನಲ್ಲಿ ನೆರವೇರಿದ ಅಂತ್ಯಕ್ರಿಯೆ
Advertisement
Advertisement
ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆಜಿಎಫ್ ಎಸ್ಪಿ ಧರಣಿ ದೇವಿ ಮುಖ್ಯಪೇದೆ ಸುರೇಶ್ ಕುಮಾರ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಾಕಷ್ಟು ಜನ ಪೊಲೀಸ್ ಸಿಬ್ಬಂದಿ ಹಾಗೂ ಸ್ನೇಹಿತರು ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದರು. ಇದನ್ನೂ ಓದಿ: ಸುನಂದಾ ಕೇಸ್‌ನಲ್ಲಿ ತರೂರ್‌ಗೆ ಕ್ಲೀನ್ ಚಿಟ್ – ಹೈಕೋರ್ಟ್ ಮೊರೆ ಹೋದ ದೆಹಲಿ ಪೊಲೀಸ್