ವಾಹನ ತಪಾಸಣೆ ವೇಳೆ ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು

Public TV
1 Min Read
Davanagere PC Death

ದಾವಣಗೆರೆ: ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್‌(Police Constable) ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ(Davanagere) ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.

ರಾಮಪ್ಪ ಪೂಜಾರ್(27) ಮೃತ ಡಿಎಆರ್ ಕಾನ್ಸ್‌ಟೇಬಲ್‌. ಹೆಬ್ಬಾಳು ಟೋಲ್ ಗೇಟ್(Hebbalu Toll Gate) ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆಗೆ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: Tumakuru | ಗಣಿ ಬಾಧಿತ ಪ್ರದೇಶಕ್ಕೆ 1,200 ಕೋಟಿ ರೂ. ಹಂಚಿಕೆ: ಪರಮೇಶ್ವರ್

ಗಂಭೀರ ಗಾಯಗೊಂಡಿದ್ದ ಕಾನ್ಸ್‌ಟೇಬಲ್‌ ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ರಾಮಪ್ಪ ಅವರ ಮೃತದೇಹವನ್ನು ಎಸ್‌ಎಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಲಾಯಿತು. ಇದನ್ನೂ ಓದಿ: ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?

ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶರಣಬಸವೇಶ್ವರ ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಧಾವಿಸಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article