ಬಳ್ಳಾರಿ: ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ಆರ್.ದಾದಾಸಾಹೇಬ್(51) ಮೃತ ಪೊಲೀಸ್ ಮುಖ್ಯ ಪೇದೆ. ಇದನ್ನೂ ಓದಿ: ಜಪಾನ್ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ
ದಾದಾಸಾಹೇಬ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಶನಿವಾರ(ಮೇ 25) ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ – ಕಟ್ಟಿಗೆಯಿಂದ ಹೊಡೆದು ಹತ್ಯೆ
ಮೃತ ಪೊಲೀಸ್ ಪೇದೆಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹೊಸಪೇಟೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ದಾದಾಸಾಹೇಬ್ ಅವರ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.