ಹಾಸನ: ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ (Police Constable) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ (Hassan) ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ.
ಪ್ರಕಾಶ್(38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್. ಇದನ್ನೂ ಓದಿ: ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್
11ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಯುದ್ಧ ನಡೆದರೆ ಇಂಗ್ಲೆಂಡ್‌ಗೆ ಪಲಾಯನ – ಪಾಕ್ ಸಂಸದ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.