ಹುಬ್ಬಳ್ಳಿ: ಅನಾರೋಗ್ಯದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ (Police Constable) ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ (Hubballi) ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.
ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ ನೇಣಿಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್. ಇವರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ತಡರಾತ್ರಿ ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್ – ಕೃತ್ಯದ ಉದ್ದೇಶ ಕೇಳಿ ಪೊಲೀಸರೇ ಶಾಕ್
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದೇಶವ್ಯಾಪಿ ಮುಂಗಾರು ಕುಂಠಿತ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ
Advertisement
Web Stories