ಉಡುಪಿ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಆದಿವುಡುಪಿ ದಿ. ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ರಾಜೇಶ್ ಕುಂದರ್ ತಮ್ಮ ರೈಫಲ್‍ನಿಂದ ಕುತ್ತಿಗೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಳಿತುಕೊಂಡ ಸ್ಥಿತಿಯಲ್ಲಿ ಮೃತದೇಹ ಇದೆ.
Advertisement
Advertisement
ಉಡುಪಿ ಜಿಲ್ಲೆಯ ಆದಿಉಡುಪಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಮ್‍ನಲ್ಲಿ ಇಡಲಾಗಿದೆ. ಇದಕ್ಕೆ ಮೂರು ಜನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಇಂದು ಬೆಳಗಿನ ಜಾವ ಇಬ್ಬರು ಸಿಬ್ಬಂದಿ ಸ್ಥಳದಲ್ಲಿ ಇಲ್ಲದ ಸಂದರ್ಭ ತನ್ನ ರೈಫಲ್‍ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡು ಹಾರಿದ ರಭಸಕ್ಕೆ ಮೆದುಳಿನ ಭಾಗ ಚಿತ್ರವಾಗಿದೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ
Advertisement
Advertisement
ಉಡುಪಿ ಎಸ್ಪಿ ವಿಷ್ಣುವರ್ಧನ್, ಉಡುಪಿ ನಗರ ಠಾಣಾ ಮತ್ತು ಮಲ್ಪೆ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಣಿಪಾಲ ಕೆಎಂಸಿ ಮತ್ತು ಮಂಗಳೂರಿನ ಆರ್‌ಎಫ್‍ಎಸ್‍ಎಲ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆಯನ್ನು ನಡೆಸಿದ್ದಾರೆ. ಪೊಲೀಸ್ ಕರ್ತವ್ಯಕ್ಕೆ ಸಂಬಂಧಪಟ್ಟಂತ ಕೆಲದಿನಗಳ ಹಿಂದೆ ರಾಜೇಶ್ ಕುಂದರ್ ಅಮಾನತು ಆಗಿದ್ದರು. 2 ದಿನಗಳ ಹಿಂದೆ ಮತ್ತೆ ರಾಜೇಶ್ ಕುಂದರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಶಾಲಾ ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ಧ್ವನಿವರ್ಧಕಗಳ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಂಜಯ್ ರಾವತ್