ಬೆಂಗಳೂರು: ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
Advertisement
ಮೃತರನ್ನು ಅನಿಲ್, ಅವಿನಾಶ್ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು. ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
Advertisement
Advertisement
ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ – ಐವರು ದುರ್ಮರಣ
Advertisement
ಶಿವಾಜಿ ನಗರ ಪೊಲೀಸ್ ಠಾಣೆಗೆ ಆಗಮಿಸಿದ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಅವರು ಶಿವಾಜಿ ನಗರ ಇನ್ಸ್ಪೆಕ್ಟರ್ ರವಿ ಕುಮಾರ್ ರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ
ಇತ್ತ ಕೊಪ್ಪಳ ಜಿಲ್ಲೆಯ ಕುಕನೂರಿನ ಬಳಿ ಸಂಭವಿಸಿದ ಇನ್ನೊಂದು ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ಸಂಬಂಧ ಸಂತಾಪ ಸೂಚಿಸಿದ್ದಾರೆ. ಘಟನೆಯು ದುಃಖ ತಂದಿದೆ ಎಂದೂ ಸಚಿವರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು, ಘಟನೆಯ ಸಂಬಂಧ ತನಿಖೆಯನ್ನು ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]