ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ (Darshan), ಪವಿತ್ರಾ ಗೌಡ (Pavithra Gowda), ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು (ಗುರುವಾರ) ಮುಕ್ತಾಯಗೊಳ್ಳಲಿದೆ.
ಜೂನ್ 11ರಂದು ಆರೋಪಿಗಳನ್ನು (Accused) ಬಂಧಿಸಲಾಗಿದ್ದು, ಈವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
Advertisement
Advertisement
ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಗಿತ್ತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. 2ನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
Advertisement
Advertisement
ಈಗಾಗಲೇ ದರ್ಶನ್ ಮತ್ತವರ ಗ್ಯಾಂಗ್‌ನ ಆರೋಪಿಗಳನ್ನ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ಸ್ಥಳ ಮಹಜರು ನಡೆಸಿ, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ, ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಮತ್ತೆ ಡಿ ಗ್ಯಾಂಗ್ ನ ಪೊಲೀಸ್ ಕಸ್ಟಡಿಗೆ ಕೇಳದಿರಲು ತೀರ್ಮಾನಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏನೋ ಯಡವಟ್ಟು ಮಾಡ್ಕೊಂಡುಬಿಟ್ಟಿದ್ದಾನೆ, ಏನಾದ್ರೂ ಮಾಡಿ: ಪಕ್ಷಬೇಧ ಮರೆತು ತನಿಖಾಧಿಕಾರಿಗಳ ಮೇಲೆ ಒತ್ತಡ
ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದರೆ, ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ (AnnapoorneshwariNagar Police Station) ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ವೇವ್ ಘಟಕ ಸ್ಥಾಪಿಸಲು ನಡ್ಡಾ ಸೂಚನೆ