ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದಲ್ಲಿ ಸಾಕ್ಷಿದಾರನಾಗಿ ಬಂದು ಈಗ ಆರೋಪಿಯಾಗಿರುವ ಚಿನ್ನಯ್ಯನ (Chinnayya) ವಿರುದ್ಧ ದೂರು ನೀಡಲು ಬಂದಿದ್ದ ಸೌಜನ್ಯ ತಾಯಿ ಕುಸುಮಾವತಿಗೆ ಎಸ್‌ಐಟಿ ಭೇಟಿಯನ್ನು ನಿರಾಕರಿಸಲಾಗಿದೆ.
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಭೇಟಿಯಾಗಲು ಇಂದು ಸೌಜನ್ಯ (Soujanya) ತಾಯಿ ಕುಸುಮಾವತಿ (Kusumavathi) ಆಗಮಿಸಿದ್ದರು.
ಕಾರಿನಲ್ಲಿ ಕುಸುಮಾವತಿ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಈ ವೇಳೆ ಅವರನ್ನು ತಡೆದ ಪೊಲೀಸರು ಭೇಟಿ ಸಂಬಂಧ ಅನುಮತಿ ಪಡೆದಿದ್ದೀರಾ ಎಂದು ಕೇಳಿದ್ದಾರೆ. ಇದನ್ನೂ ಓದಿ:ಷಡ್ಯಂತ್ರಬಯಲಾದ ಬೆನ್ನಲ್ಲೇ ತಿಮರೋಡಿ ಮನೆಗೆಸುಜಾತ ಭಟ್‌ಗೆಇಲ್ಲ ಪ್ರವೇಶ
ಈ ಪ್ರಶ್ನೆಗೆ ಅನುಮತಿ ಪಡೆದಿಲ್ಲ ಎಂದು ಉತ್ತರಿಸಿದ್ದಾರೆ. ಅನುಮತಿ ಪಡೆಯದ ಕಾರಣ ಭೇಟಿಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ವಾಪಸ್ ಕಳುಹಿಸಿದ್ದಾರೆ. ಪೊಲೀಸರು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕುಸುಮಾವತಿ ಕಾರಿನಿಂದ ಇಳಿಯದೇ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.
ಯಾವ ಕಾರಣಕ್ಕೆ ಕುಸುಮಾವತಿ ಬಂದಿದ್ದಾರೆ ಎನ್ನುವುದು ಸ್ವಷ್ಟವಾಗಿಲ್ಲ . ಆದರೆ ಬುರುಡೆ ಪ್ರಕರಣದಲ್ಲಿ ಸಾಕ್ಷಿದಾರನಾಗಿ ಬಂದು ಈಗ ಆರೋಪಿಯಾಗಿರುವ ಚಿನ್ನಯ್ಯನ ವಿರುದ್ಧ ದೂರು ನೀಡಲು ಬಂದಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ:ಬುರುಡೆ ಗ್ಯಾಂಗ್ ಹೇಳಿದಂತೆ ನಾನು ಮಾಡಿದ್ದೇನೆ– ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ
ಯೂಟ್ಯೂಬ್ ವಾಹಿನಿಗಳಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ಕೆಲ ಸ್ಫೋಟಕ ವಿಚಾರಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಸಾಕ್ಷಿಯಾಗಿ ಪರಿಗಣಿಸುವಂತೆ ದೂರು ನೀಡಲು ಬಂದಿದ್ದರು ಎನ್ನಲಾಗುತ್ತಿದೆ.
ಸೌಜನ್ಯ ಪ್ರಕರಣ ಎಸ್‌ಐಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣದ ತನಿಖೆ ನಡೆಸುವುದಿಲ್ಲ ಎಂದು ತಿಳಿಸಿದ್ದರು.