ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ (Police Department) ಕೇಸರಿಕರಣಕ್ಕೆ ಅವಕಾಶ ನೀಡಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತು ಬಿಜೆಪಿಗರನ್ನು ಕೆರಳಿಸಿದೆ. ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಮಲ ಪಡೆ ವಾಗ್ದಾಳಿ ನಡೆಸಿದೆ.
ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ.. ಚುನಾವಣೆ ವೇಳೆ ಕೇಸರಿ ವಸ್ತ್ರ ಧರಿಸಿ, ಹಣೆ ಮೇಲೆ ಊರಗಲದ ತಿಲಕ ಇಟ್ಟು ಎಲೆಕ್ಷನ್ ಹಿಂದೂಗಳಾಗಿದ್ದ ಕಾಂಗ್ರೆಸ್ ನಾಯಕರು ಊಸರವಳ್ಳಿ ಬಣ್ಣ ಬದಲಿಸುವಂತೆ ಈಗ ತಮ್ಮ ಮೂಲರೂಪಕ್ಕೆ ಹಿಂತಿರುಗಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿ ಕಾರಿದೆ. ಇದನ್ನೂ ಓದಿ: ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಡಿಕೆಶಿ
ಈನಡುವೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಹ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ. ಇಡೀ ದೇಶದಲ್ಲೇ ಕರ್ನಾಟಕ ಪೊಲೀಸ್ ಉತ್ತಮ ಹೆಸರು ಮಾಡಿದೆ. ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 6 ತಿಂಗಳಲ್ಲಿ ಏನು ಮಾಡಿದ್ದೀರಿ- ಅಧಿಕಾರಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ
ಒಟ್ಟಿನಲ್ಲಿ ಕಾಂಗ್ರೆಸ್‌ನವರು ತಮ್ಮ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ. ಅವರು ಎಸ್‌ಡಿಪಿಐ (SDPI), ಪಿಎಫ್‌ಐ (PFI) ನಂತಹ ಸಮಾಜ ಘಾತುಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಬೇಕಿತ್ತು ಎಂದು ಸಿಎಂ, ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪೊಲೀಸರು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ, ಸಮಾಜ ಘಾತಕ ಶಕ್ತಿಗಳ ವಿರುದ್ಧಹೋರಾಟ ಮಾಡಿ, ರಾಜಕೀಯ ಒತ್ತಡಕ್ಕೆ ಮಣಿಯಬೇಡಿ. ನಮ್ಮ ಪಕ್ಷದಲ್ಲಿ ಯಾರಾದರೂ ಅಪರಾಧ ಮಾಡಿದ್ರೆ, ನಾವು ರಕ್ಷಣೆ ಮಾಡಲ್ಲ. ಎಲ್ಲಿಯೂ ನೈತಿಕ ಪೋಲೀಸ್ ಗಿರಿ ನಡೆದಿಲ್ಲ, ಈ ರೀತಿ ಹೇಳಿ, ಪೋಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಆಗುತ್ತಿದೆ ಎಂದು ಟೀಕಿಸಿದ್ದಾರೆ.