– 4,000ಕ್ಕೂ ಹೆಚ್ಚು ಪೊಲೀಸರಿಂದ ಕರ್ತವ್ಯ ನಿರ್ವಹಣೆ
ಮೈಸೂರು: ವಿಜಯದಶಮಿ ಜಂಬೂಸವಾರಿ (Jamboo Savari) ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ (Police Department) ಬಿಗಿ ಭದ್ರತೆ ಒದಗಿಸಲಾಗುವುದು ಎಂದು ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ (Seema Latkar) ಹೇಳಿದ್ದಾರೆ.
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಜಂಬೂಸವಾರಿ ಮೆರವಣಿಗೆಯ ಪುಷ್ಪಾರ್ಚನೆ ರಿಹರ್ಸಲ್ ನಡೆದಿದೆ. ಅಂತಿಮ ಹಂತದ ರಿಹರ್ಸಲ್‌ನಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ, ಅಶ್ವರೋಹಿ ದಳ, ಪೊಲೀಸ್ ಇಲಾಖೆಯ ಎಂಟು ತುಕಡಿಗಳು ಭಾಗಿಯಾಗಿವೆ. ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್16 ಯುದ್ಧ ವಿಮಾನ ಹಾರಿಸಿದ್ದ ರತನ್ ಟಾಟಾ
Advertisement
Advertisement
ಮೈಸೂರು ಜಿಲ್ಲೆ ಮಾತ್ರದವಲ್ಲದೇ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತಾ ಕರ್ತವ್ಯ ನಿರ್ವಹಿಸಲಿದ್ದಾರೆ. ಮಫ್ತಿಯಲ್ಲಿರುವ ಪೊಲೀಸರು ಎಲ್ಲೆಡೆ ನಿಗಾ ವಹಿಸಲಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗ ಸೇರಿದಂತೆ ಆಯಕಟ್ಟಿನ ಜನನಿಬಿಡ ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಮಾಂಸಾಹಾರ ಸೇವನೆಯಿಂದ ಫುಡ್ ಪಾಯಿಸನ್ – 20 ಮಂದಿ ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು
Advertisement