CrimeLatestMain PostNational

ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ

ಲಕ್ನೋ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ದನದ ಕೊಟ್ಟಿಗೆಗೆ ಕರೆದೊಯ್ದು ಹತ್ತು ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್‍ನಲ್ಲಿ (Badaun of Uttar Pradesh) ನಡೆದಿದೆ.

ವಿಷಯ ತಿಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು, ಇದೀಗ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

ಉಘೈಟಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 6 ವರ್ಷದ ತಮ್ಮ ಮಗಳು ಮನೆಯ ಆವರಣದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕ ಆಕೆಯನ್ನು ಅಲ್ಲಿಂದ ಕರೆದುಕೊಂಡು ದನದ ಕೊಟ್ಟಿಗೆಗೆ ಹೋಗಿ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ತಮ್ಮ ಮಗಳು ಅಳುತ್ತಾ ಮನೆಗೆ ಬಂದಾಗ, ಆಕೆಯ ಬಟ್ಟೆ ಮತ್ತೆ ಇತ್ಯಾದಿಗಳನ್ನು ಗಮನಿಸಿ ನಮಗೆ ಅರ್ಥವಾಯಿತು ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಗೆ ಬಂದ ನಂತರ ಬಾಲಕಿ ನಡೆದ ಘಟನೆಯನ್ನೆಲ್ಲಾ ಹೇಳಿದ್ದು, ನಂತರ ಕುಟುಂಬಸ್ಥರು ಆಕೆಯನ್ನು ಠಾಣೆಗೆ ಕರೆದೊಯ್ದು ಮಾಹಿತಿ ನೀಡಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಎಸ್‍ಪಿ ಸಿದ್ಧಾರ್ಥ್ ವರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ – ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

ಆರೋಪಿಯೂ 10 ವರ್ಷದ ಅಪ್ರಾಪ್ತ ಬಾಲಕನಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button