ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರು ಪೊಲೀಸರ ವಶಕ್ಕೆ

Public TV
1 Min Read
Belagavi Farmers

ಬೆಳಗಾವಿ: ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆಯನ್ನು ಘೋಷಿಸಿ, ರೈತರಿಗಿರುವ ವಿದ್ಯುತ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಾವೇರಿಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Belagavi Farmers 1

ತಾಲೂಕಿನ ಹಿರೇಬಾಗೆವಾಡಿ ಟೋಲ್ ನಾಕಾ ಬಳಿ ರೈತರನ್ನು ತಡೆದ ಪೋಲಿಸರು 30ಕ್ಕೂ ಹೆಚ್ಚು ರೈತ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವಾಹನದಲ್ಲಿ ಕರೆದೊಯ್ಯುವ ವೇಳೆ ರೈತರು ತಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಸರ್ಕಾರದ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ

ರೈತರಿಗೆ ಇಂದು ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರಿಗೆ ವಿದ್ಯುತ್ ಸಮಸ್ಯೆಯೂ ಎದುರಾಗಿದ್ದು ಕಂಗಾಲಾಗಿದ್ದಾರೆ. ಹೀಗಿದ್ದರೂ ಈ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಎಲ್ಲಾ ರೈತ ಸಂಘಟನೆಗಳ ನೇತೃತ್ವದಲ್ಲಿ ಇಂದು ಶಿಗ್ಗಾಂವಿಯಲ್ಲಿರುವ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ರೈತರು ಹೊರಟಿದ್ದರು.

Belagavi Farmers 2

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ, ಸರ್ಕಾರ ರೈತರು ಬೆಳೆದ ರಾಗಿ, ಜೋಳ ಸೇರಿದಂತೆ 20ಕ್ಕೂ ಹೆಚ್ಚು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ

 

Share This Article
Leave a Comment

Leave a Reply

Your email address will not be published. Required fields are marked *