ಲಕ್ನೋ: ಮೆಡಿಕಲ್ ಸ್ಟೋರ್ (Medical Store) ಮಾಲಿಕನೊಬ್ಬ (Owner) ಶಸ್ತ್ರಚಿಕಿತ್ಸೆ (Surgery) ನಡೆಸಿದ ಪರಿಣಾಮ ರೋಗಿ (Patient) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಖೇಜೂರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ರೆಹಮಾನ್ ಬಂಧಿತ ವ್ಯಕ್ತಿ. ಈತ ವೃಷಣದಲ್ಲಿ ಉಂಟಾಗುವ ಊತದ ಸಮಸ್ಯೆಯಿಂದ ಬಳಲುತ್ತಿದ್ದ ಮುನ್ನಾ ಗುಪ್ತಾಗೆ ಶಸ್ತ್ರಚಿಕಿತ್ಸೆ ನಡೆಸಿದ್ದ. ಆದರೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮುನ್ನಾ ಗುಪ್ತಾನ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ಅದಾದ ಬಳಿಕ ಮುನ್ನಾ ಗುಪ್ತಾನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಅಮೃತ್‍ಪಾಲ್‍ಗೆ ಆಶ್ರಯ ಕೊಟ್ಟಿದ್ದ ಮಹಿಳೆ ಅರೆಸ್ಟ್
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಗುಪ್ತಾ ಪುತ್ರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಘಟನೆಗೆ ಸಂಬಂಧಿಸಿ ರೆಹಮಾನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮುನ್ನಾ ಗುಪ್ತಾನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಧು ಪತ್ನಿಗೆ ಸ್ತನ ಕ್ಯಾನ್ಸರ್- ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇನೆಂದು ಭಾವುಕ ಪತ್ರ