ನವದೆಹಲಿ: ಕ್ರಿಮಿನಲ್ ಪ್ರಕರಣಗಳ ತನಿಖೆ ಆರಂಭಿಸುವ ಮೊದಲು ಆಯಾ ಪೊಲೀಸ್ ಠಾಣೆಯ ಜನರಲ್ ಡೈರಿಯಲ್ಲಿ ನೋಂದಣಿ ಮಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪೊಲೀಸ್ ಠಾಣೆಯ ಜನರಲ್ ಡೈರಿಯಲ್ಲಿ ದೂರನ್ನು ನೋಂದಾಯಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ಹೈ ಕೋರ್ಟ್ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದ ಪ್ರಕ್ರಿಯೆಯನ್ನು ರದ್ದುಗೊಳಿಸಿತ್ತು. ವಿಚಾರಣೆ ನಡೆಸಿದ ನ್ಯಾ.ಎನ್.ವಿ.ರಾಮಾನಾ, ನ್ಯಾ. ಅಬ್ದುಲ್ ನಝೀರ್ ಅವರನ್ನೊಳಗೊಂಡ ಪೀಠ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಜನರಲ್ ಡೈರಿ ನೋಂದಣಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ.
Advertisement
ಜನರಲ್ ಡೈರಿಯಲ್ಲಿನ ಮಾಹಿತಿ ಆಧಾರದ ಮೇಲೆ ತನಿಖೆ ನಡೆಯುವುದಿಲ್ಲ ಹಾಗಾಗಿ ತನಿಖೆಗೆ ನೋಂದಣಿ ಕಡ್ಡಾಯವಲ್ಲ ಎನ್ನುವ ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ಅವರ ವಾದವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Advertisement
ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆಗಳೆಲ್ಲಾ ಜನರಲ್ ಡೈರಿಯಲ್ಲಿ ದಾಖಲಾಗುತ್ತದೆ. ದಾಖಲಿಸುವುದು ಠಾಣೆಯ ಪೊಲೀಸ್ ಅಧಿಕಾರಿಯ ಕರ್ತವ್ಯ ಅನ್ನುವುದನ್ನು ಸುಪ್ರೀಂ ಕೋರ್ಟ್ ಹೇಳಿದೆ.