ಬೆಂಗಳೂರು: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್(Civil Police Constable) ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಮನವಿ ಮಾಡಿಕೊಂಡಿದೆ.
ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸುವ ಸಲುವಾಗಿ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಆಗಸ್ಟ್ 2ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯಕೀಯ ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ಕೊನೆ ದಿನ – ಕೆಇಎ
