ಚಿತ್ರದುರ್ಗ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯೂ ಆಗಿರುವ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರು ನೀಡಿದ ದೂರನ್ನು ಆಧರಿಸಿ ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354 (ಅತ್ಯಾಚಾರಕ್ಕೆ ಯತ್ನ) ಹಾಗೂ ಬಸವರಾಜನ್ ಮತ್ತು ಸೌಭಾಗ್ಯ ವಿರುದ್ಧ ಸೆಕ್ಷನ್ 341, 342, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಮುರುಘಾ ಶರಣರ ವಿರುದ್ಧ ಕೇಸ್
Advertisement
Advertisement
ಆಡಳಿತಾಧಿಕಾರಿ ಬಸವರಾಜನ್ ಹಾಸ್ಟೆಲ್ ಪರಿಶೀಲನೆ ಮಾಡುವ ನೆಪದಲ್ಲಿ ಆಗಾಗ್ಗೆ ಬಂದು ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ವಿಚಾರ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನಟಿ, ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಕೊಲೆಗೆ ಮೆಗಾ ಟ್ವಿಸ್ಟ್: ವೈರಲ್ ವಿಡಿಯೋ ಬಗ್ಗೆ ಅನುಮಾನ
Advertisement
ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಹಾಸ್ಟೆಲ್ ನಿಂದ ಹೊರ ಹೋಗಿದ್ದರು. ಆದರೆ ಅವರು ಮನೆಗೆ ತೆರಳದೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಆದರೆ ಮಕ್ಕಳ ಸಂಬಧಪಟ್ಟವರಿಗೆ ಮಾಹಿತಿ ನೀಡದೇ ತನ್ನ ಮನೆಯಲ್ಲೇ ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.