ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ನಡೆದಿದೆ.
ಗಾಯಾಳು ಆರೋಪಿಯನ್ನು ಜಾನ್ಸನ್ ಎನ್ನಲಾಗಿದ್ದು, ಈತ ಜೂನ್ 10 ರಂದು ನಡೆದ ಸಾಯಿ ಚರಣ್ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಲು ಹೋದ ಸಂದರ್ಭದಲ್ಲಿ ಆರೋಪಿ ಮೂತ್ರ ವಿಸರ್ಜನೆಗೆ ತೆರಳುತ್ತೇನೆಂದು ಪೆÇಲೀಸರ ಬಳಿ ಕೇಳಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ವೇಳೆ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಪರಿಣಾಮ ಕಾಂತ ಮತ್ತು ಮಂಜೇಶ್ ಎಂಬ ಪೇದೆಗಳಿಬ್ಬರಿಗೆ ಗಾಯಗಳಾಗಿವೆ. ತಕ್ಷಣವೇ ಎಚ್‍ಎಎಲ್ ಪೊಲೀಸರು ಜಾನ್ಸನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಾಳು ಆರೋಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
https://www.youtube.com/watch?v=Us502DgmdJs