ಕಲಬುರಗಿ: ದರೋಡೆಕೋರನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಕಲಬುರಗಿ ಹೊರವಲಯದ ಗ್ರೀನ್‍ಸಿಟಿ ಬಳಿ ನಡೆದಿದೆ.
ಕುಖ್ಯಾತ ಹಂತಕ ಮಲ್ಲಿಕಾರ್ಜುನ ಕಡಬುರ ಮೇಲೆ ಗುಂಡಿನ ದಾಳಿ ನಡೆದಿದೆ. ಆರೋಪಿ ಮಲ್ಲಿಕಾರ್ಜುನ, ಮೃತ ರೌಡಿಶೀಟರ್ ಕರಿಚಿರತೆ ಸಹಚರ. ದರೋಡೆ ಪ್ರಕರಣವೊಂದರಲ್ಲಿ ಬಂಧಿಸಲು ಪೊಲೀಸರು ಹೋದಾಗ ಹಂತಕ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಪಿಎಸ್‍ಐ ಪರಶುರಾಮ ವಾನಜರಕರ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
Advertisement
Advertisement
ಘಟನೆಯಲ್ಲಿ ಪೇದೆಗಳಾದ ಅನಿಲ್ ಮತ್ತು ವಿಶ್ವನಾಥ್‍ಗೆ ಗಾಯವಾಗಿದ್ದು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.