ಆನೇಕಲ್: ಬೆಂಗಳೂರು ಗ್ರಾಮಾಂತರ ಆನೇಕಲ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಕೊಲೆ ಆರೋಪಿಯು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಗೆ ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಸರ್ಜಾಪುರದಲ್ಲಿ ನಡೆದಿದೆ.
Advertisement
ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
Advertisement
ಜ.28ರಂದು ಮಾಜಿ ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯನ್ನು ಗುಬ್ಬಚ್ಚಿ ಸೀನಾ ಗ್ಯಾಂಗ್ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿತ್ತು.
Advertisement
ದೊಮ್ಮಸಂದ್ರದ ಬಳಿ ಅವಿತು ಕುಳಿತಿದ್ದ ರೌಡಿಶೀಟರ್ ಗುಬ್ಬಚ್ಚಿ ಸೀನನನ್ನು ಪೊಲೀಸರು ಬಂಧಿಸಲು ಹೋಗಿದ್ದರು. ಇನ್ಸ್ಪೆಕ್ಟರ್ ನವೀನ್ ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಶರಣಾಗುವಂತೆ ತಿಳಿಸಿದ್ದರು. ಈ ವೇಳೆ ಸೀನಾ, ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇನ್ಸ್ಪೆಕ್ಟರ್ ನವೀನ್ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಫೈಯರ್ ಮಾಡಿ ಬಂಧಿಸಿದ್ದಾರೆ.