ಬೆಂಗಳೂರು: ಭಾನುವಾರ ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ಕಾರ್ಯಚರಣೆ ಶುರುವಾಗಿದ್ದು, ಇಬ್ಬರು ರೌಡಿಶೀಟರ್ ಮೇಲೆ ಗುಂಡು ಹಾರಿಸಿದ್ದಾರೆ.
ಬೆಂಗಳೂರು ಹೊರವಲಯದಲ್ಲಿ ತಲಘಟ್ಟಪುರ ಪೊಲೀಸರು ಇಬ್ಬರು ರೌಡಿಶೀಟರ್ಸ್ ಮೇಲೆ ಶೂಟೌಟ್ ಮಾಡಿದ್ದಾರೆ. ಆರೋಪಿಗಳಾದ ಕೆಂಬತ್ತಹಳ್ಳಿ ಪರಮೇಶ್ ಮತ್ತು ಆತನ ಸಹಚರ ಸಂತೋಷ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಇಬ್ಬರು ರೌಡಿಶೀಟರ್ ಮೇಲೆ ಕೊಲೆ ಕೇಸ್ ದಾಖಲಾಗಿತ್ತು. ಈ ಸಂದರ್ಭದಲ್ಲಿ ಪರಮೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಪಿಸ್ತೂಲ್ ನಿಂದ ಫೈರಿಂಗ್ ಮಾಡಿದ್ದಾರೆ. ಈ ದಾಳಿಯಲ್ಲಿ ಮುಖ್ಯ ಪೇದೆ ಸುರೇಶ್ ಮತ್ತು ಪೇದೆ ನೇಮಿನಾಥ್‍ಗೆ ಗಾಯವಾಗಿದೆ. ಇದರಿಂದ ಆತಂಕಗೊಂಡ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯಕ್ಕೆ ಆರೋಪಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.