ಕಲಬುರಗಿ: ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡೇಟು ನೀಡಲಾಗಿದೆ.
ಕೊಲೆ ಆರೋಪಿ ಈಶ್ವರ ರಾಠೋಡ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಸ್ಟೇಷನ್ ಬಜಾರ್ ಪೊಲೀಸರು ಆರೋಪಿಯ ಎರಡೂ ಕಾಲಿಗೆ ಗುಂಡೇಟು ನೀಡಿದ್ದಾರೆ.
ಹಣಕಾಸು ವಿಷಯಕ್ಕಾಗಿ ಫೈನಾನ್ಸಿಯರ್ ಅನಿಲ್ ರಾಠೋಡ್ ಎಂಬಾತನ ಕೊಲೆ ನಡೆದಿತ್ತು. ಕೊಲೆ ನಡೆದ ಎರಡು ದಿನಗಳಲ್ಲಿ ಕೊಲೆ ಆರೋಪಿ ಪತ್ತೆ ಹಚ್ಚಿ ಬಂಧನಕ್ಕೆ ಪೊಲೀಸರು ಮುಂದಾಗಿದ್ದರು. ಆಗ ಆರೋಪಿ ಈಶ್ವರ ರಾಠೋಡ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದಾನೆ.
ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿ ಈಶ್ವರ ರಾಠೋಡನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಮ್ಸ್ ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿದ್ದಾರೆ.

