ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ರಾಜಧಾನಿಯೆಲ್ಲೆಡೆ ಪೊಲೀಸರು ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂದು ಕಟ್ಟೆಚ್ಚರ ವಹಿಸಿದ್ದಾರೆ.
ಇಂದು ಸಂಜೆಯಿಂದಲೇ ನಗರದೆಲ್ಲೆಡೆ ಪೊಲೀಸ್ ಇಲಾಖೆ ಸರ್ಪಗಾವಲು ಹಾಕಲು ಮುಂದಾಗಿದೆ. ನಗರದಲ್ಲಿ ಹೊಸ ವರ್ಷ ಆಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗಬಾರದೆಂದು ಖಾಕಿ ಪಡೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರಿನೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ನಗರದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಎಲ್ಲೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
Advertisement
Advertisement
ಬಂದೋಬಸ್ತ್ ಗೆ 5 ಜನ ಹೆಚ್ಚುವರಿ ಆಯುಕ್ತರು, 15 ಜನ ಡಿಸಿಪಿಗಳು, 45 ಎಸಿಪಿಗಳು, 220 ಇನ್ಸ್‌ಪೆಕ್ಟರ್, 430 ಪಿಎಸ್‍ಐ, 10 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಹಾಗೆಯೇ ಹೋಂಗಾರ್ಡ್ 1500, ಗರುಡಾ ಪೋರ್ಸ್ 1, ಕ್ಯೂಅರ್ಟಿ 2 ಪಡೆ, ವಾಟರ್ ಜೆಟ್ 2, ಕೆಎಸ್‍ಆರ್‍ಪಿ 50 ತುಕಡಿ, ಸಿಎಆರ್ 30 ತುಕಡಿಗಳನ್ನು ಏರ್ಪಡಿಸಲಾಗಿದೆ. ಅಷ್ಟೇ ಅಲ್ಲದೆ ನಗರದ ಜನದಟ್ಟನೆ ಇರುವ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ 1 ಸಾವಿರ ಸಿಸಿಟಿವಿಗಳನ್ನು ಅಳವಡಿಕೆ ಮಾಡಲಾಗಿದೆ. ಹಾಗೆಯೇ 15 ವಾಚ್ ಟವರ್, ನಾಲ್ಕು ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗಿದೆ. ಇದನ್ನೂ ಓದಿ: 2019ರ ಆಗಮನಕ್ಕೆ ಎಂ.ಜಿ, ಬ್ರಿಗೇಡ್ ರೋಡ್ ಸುತ್ತಮುತ್ತ ಫುಲ್ ಅಲರ್ಟ್
Advertisement
ಹೊಸ ವರ್ಷದ ಆಚರಣೆ ಹಿನ್ನಲೆಯಲ್ಲಿ ವೈಟಫಿಲ್ಡ್ ವಿಭಾಗದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದಿವಂಗತ ಮಾನ್ಯ ಶ್ರೀ ಮಧುಕರ್ ಶೆಟ್ಟಿ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸುರಕ್ಷಿತ ಹೊಸ ವರ್ಷ ಆಚರಣೆಯನ್ನು ಮಾಡೋಣ.@BlrCityPolice @CPBlr pic.twitter.com/mLOme9h2xa
— S.Girish, IPS (@dcpwhitefield) December 31, 2018
Advertisement
ಇದಷ್ಟೇ ಅಲ್ಲದೆ ಕಬ್ಬನ್ ಪಾರ್ಕ್‍ನಲ್ಲಿ ಭದ್ರತೆ ಮತ್ತು ಅನೈತಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇವುಗಳಿಗೆ ಬ್ರೇಕ್ ಹಾಕಲು ತೋಟಗಾರಿಕಾ ಇಲಾಖೆ 120 ಸಿಸಿಟಿವಿ ಅಳವಡಿಕೆಗೆ ಮುಂದಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ, ಸಂಸದ ಪಿ.ಸಿ ಮೋಹನ್ ಅವರು 1 ಕೋಟಿ ರೂಪಾಯಿ ಅನುದಾನದಲ್ಲಿ ಸಿಸಿಟಿವಿ ಅಳವಡಿಕೆ ಮಾಡಿಸುತ್ತಿದ್ದಾರೆ. ಪ್ರಥಮ ಹಂತದಲ್ಲಿ 60 ಲಕ್ಷ ರೂಪಾಯಿ ಅನುದಾನದಲ್ಲಿ ಕಾಮಗಾರಿ ಶುರು ಮಾಡಲಾಗುತ್ತಿದೆ. ಸಿಸಿಟಿವಿ ಸೇರಿದಂತೆ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ. ಸದ್ಯದಲ್ಲೇ ಸಿಸಿಟಿವಿ ಅಳವಡಿಕೆ ಕಾರ್ಯ ಶುರು ಮಾಡಲಾಗುತ್ತದೆ ಎಂದು ಮಾಹಿತಿ ದೊರಕಿದೆ.
Awareness Parade ahead of New Year Celebrations in Whitefield Division. We paid our respects to Late Shri Madhukar Shetty Sir IPS on this occasion. Safe and Prosperous New Year Greetings @CPBlr @BlrCityPolice pic.twitter.com/vie9bFaSyf
— S.Girish, IPS (@dcpwhitefield) December 31, 2018
ಅದೇನೆ ಆಗಲಿ ಹೊಸ ವರ್ಷದ ಸಂಭ್ರಮದಲ್ಲಿ ಪೊಲೀಸ್ ಇಲಾಖೆಯವರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಸಾರ್ವಜನಿಕರು ನ್ಯೂ ಇಯರ್ ಆಚರಿಸಲಿ ಎಂದು ಶ್ರಮ ಪಡುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv