ಕೋಲಾರ: ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು (Chest Pain) ಪೊಲೀಸ್ ಹೆಡ್ ಕಾನ್ಸ್‌ಟೇಬಲ್ (Police Head Constable) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಸುಬ್ರಮಣಿ ಮೃತಪಟ್ಟ ನಂಗಲಿ ಪೊಲೀಸ್ ಠಾಣೆ ಮುಖ್ಯಪೇದೆ. ಭಾನುವಾರ ರಾತ್ರಿ ಸುಬ್ರಮಣಿ 112 ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ತಲ್ವಾರ್ ಹಿಡಿದು ಡ್ಯಾನ್ಸ್ – ರೀಲ್ಸ್, ಲೈಕ್ ಮಾಡಿದ ಇಬ್ಬರಿಗೂ ಬಿಸಿ ಮುಟ್ಟಿಸಿದ ಪೊಲೀಸರು
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸುಬ್ರಮಣಿ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟರುವ ಶಂಕೆ ವ್ಯಕ್ತವಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: KSET: ಡಿ.22ರಿಂದ 24ರವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ದಾಖಲೆ ಪರಿಶೀಲನೆ-ಕೆಇಎ

