ಕಾರವಾರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಗೋಕರ್ಣ, ಮುರುಡೇಶ್ವರದಲ್ಲಿ ಪೊಲೀಸ್ ಹೈಅಲರ್ಟ್ ಆಗಿದ್ದಾರೆ. ಹೋಮ್ ಸ್ಟೇ ,ರೆಸಾರ್ಟ್‌ಗಳಲ್ಲಿ ಪ್ರವಾಸಿಗರ ಮಾಹಿತಿ ಕಲೆಹಾಕುತ್ತಿದ್ದಾರೆ. ಎಲ್ಲೆಡೆ ಪ್ರವಾಸಿ ತಾಣಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ: ಸಿಎಂ
ಜಿಲ್ಲೆಯ ಹೋಟೆಲ್, ಲಾಡ್ಜ್, ಹೋಮ್ ಸ್ಟೇಗಳಲ್ಲಿ ಕಡ್ಡಾಯ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಿದ್ದಾರೆ. ಹೊರ ರಾಜ್ಯ, ವಿದೇಶಿ ಪ್ರವಾಸಿಗರ ಮಾಹಿತಿಯನ್ನೂ ಪೊಲೀಸರು ಕಲೆಹಾಕಿದ್ದಾರೆ.
ಕರಾವಳಿ ಸಮುದ್ರ ಭಾಗದಲ್ಲಿ ಕರಾವಳಿ ಕಾವಲುಪಡೆ, ಭಾರತೀಯ ಕೋಸ್ಟ್ ಗಾರ್ಡ್‌ನಿಂದ ಕೂಮಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಸಮುದ್ರ ಮಾರ್ಗದಲ್ಲಿ ಬೋಟುಗಳ ದಾಖಲೆ ತಪಾಸಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಹೊಸ ಬಾಬ್ರಿ ಮಸೀದಿಗೆ ಪಾಕ್ ಸೈನಿಕರು ಮೊದಲ ಇಟ್ಟಿಗೆ ಇಡುವ ಕಾಲ ದೂರವಿಲ್ಲ: ನಾಲಿಗೆ ಹರಿಬಿಟ್ಟ ಪಾಕ್ ಶಾಸಕಿ
ಕರಾವಳಿ ಕಾವಲುಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಮುದ್ರ ಭಾಗದಲ್ಲಿ ತಪಾಸಣೆ ಹೆಚ್ಚಿಸಿದೆ.