ಹುಬ್ಬಳ್ಳಿ: ಪೌರತ್ವ ಕಾಯ್ದೆ ಬಗ್ಗೆ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವಾಗಲೇ ನಗರದ ಬೆಂಡಿಗೇರಿ ಠಾಣೆಯ ಇನ್ಸ್‌ಪೆಕ್ಟರ್ ಎನ್‍ಆರ್ ಸಿ ಹಾಗೂ ಸಿಎಎ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಅರುಣಕುಮಾರ್ ಎಂಬವರು ಫೇಸ್‍ಬುಕ್ ಮೂಲಕ ಎನ್‍ಆರ್ ಸಿಸಿ ಹಾಗೂ ಸಿಎಎ ಬಗ್ಗೆ ತಪ್ಪು ಮಾಹಿತಿ ನೀಡುವವರಿಗೆ ತಿಳುವಳಿಕೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಅರುಣ್ ಕುಮಾರ್ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.
Advertisement
Advertisement
ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಬಿಜೆಪಿ ಮಾಹಿತಿ ನೀಡುತ್ತಿದೆ. ಇದರ ಮಧ್ಯೆ ಇದೀಗ ಪೊಲೀಸ್ ಅಧಿಕಾರಿಯಾಗಿದ್ದುಕೊಂಡು ಈ ಕಾಯ್ದೆ ಬಗ್ಗೆ ತಿಳುವಳಿಕೆ ನೀಡುತ್ತಿರುವುದು ಪರ ಹಾಗೂ ವಿರೋಧ ಟೀಕೆಗೆ ಗುರಿಯಾಗಿದೆ.
Advertisement
ಸಾರ್ವಜನಿಕರ ಪ್ರಶ್ನೆಗೆ ಫೇಸ್‍ಬುಕ್ ಪೋಸ್ಟ್ ಮೂಲಕ ಪೌರತ್ವ ಕಾಯ್ದೆಯನ್ನು ಅರುಣ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಇನ್ನು ಕೆಲವರು ತಾವು ಬಿಜೆಪಿ ಫಾಲೋವರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಸರ್ಕಾರಿ ಅಧಿಕಾರಿಗೆ ರಾಜಕೀಯ ಯಾಕೆ ಎಂದು ಕೆಲವರು ತರಾಟೆಗೆ ತಗೆದುಕೊಂಡಿದ್ದಾರೆ.