ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Pratima) ಅವರ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರಿಂದ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿಮಾ ಈ ಹಿಂದೆ ಕಲ್ಲು ಕ್ವಾರಿಗಳ ಬಳಿ ಹೋಗಿ ಎಚ್ಚರಿಕೆ ನೀಡಿದ್ದರಂತೆ. ಅಲ್ಲದೇ ಅಕ್ರಮ ಗಣಿಗಾರಿಕೆ (Mining) ನಡೆಸುವ ಜಾಗದ ಮೇಲೆ ರೇಡ್ ಮಾಡುತ್ತಿದ್ದ ಪ್ರತಿಮಾ, ಸಹಜವಾಗಿಯೇ ಕೆಲವರೊಂದಿಗೆ ವಿರೋಧ ಸಹ ಕಟ್ಟಿಕೊಂಡಿದ್ದರಂತೆ. ಹಾಗಾಗಿ ವೃತ್ತಿಯಲ್ಲಿ ಯಾರಾದ್ರೂ ವೈಷಮ್ಯ ಹೊಂದಿದ್ರಾ? ಅಥವಾ ವೈಯಕ್ತಿಕ ಕಾರಣಗಳಿಗಾಗಿ ಕೊಲೆ ಮಾಡಿದ್ರಾ ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆ (Police Investigation) ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement
ಇದರಿಂದ ಅಕ್ರಮ ಗಣಿಗಾರಿಕೆ ತಡೆದಿದ್ದೇ ಕೊಲೆಗೆ ಕಾರಣನಾ? ಗಣಿಗಾರಿಕೆ ಪರವಾನಗಿ ನವೀಕರಣ ವಿಚಾರಕ್ಕೆ ಎಲ್ಲಿಯಾದ್ರೂ ಗಲಾಟೆಯಾಗಿತ್ತಾ? ಗಣಿಗಾರಿಕೆ ಪರವಾನಗಿ ಕೊಡುವ ವಿಚಾರದಲ್ಲಿ ವೈಷಮ್ಯ ಸಾಧಿಸಿ ಕೊಲೆ ಮಾಡಿದ್ರಾ? ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯಾರಾದರೂ ಕೊಲೆ ಮಾಡಿದ್ರಾ? ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ
Advertisement
Advertisement
ಪ್ರತಿಮಾ ಕರ್ತವ್ಯಕ್ಕೆ ಸೇರಿದ ನಂತರ ರಾಮನಗರದಲ್ಲಿ ಹೆಚ್ಚು ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಬೇರೆ ಇಲಾಖೆ ಅಧಿಕಾರಿಗಳೊಂದಿಗೂ ಉತ್ತಮ ಒಡನಾಟ ಹೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapura) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ (ನ.4) ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ
ಕಳೆದ 8 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಶನಿವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ತಮ್ಮ ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಭಾನುವಾರ (ನ.5) ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.