ಉಡುಪಿ: ತಮಿಳುನಾಡಿನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ವಿಲ್ಸನ್‍ನ ಶೂಟೌಟ್ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಪೊಲೀಸರ ಜೊತೆ ಮಂಗಳೂರು ಹಾಗೂ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಬ್ದುಲ್ ಶಮೀಮ್ ಮತ್ತು ತೌಫಿಕ್ ಎಂದು ಗುರುತಿಸಲಾಗಿದೆ. ಬಂಧಿತರು ತಮಿಳುನಾಡಿನ ಕೊಯಮತ್ತೂರಿನಿಂದ ತಪ್ಪಿಸಿಕೊಂಡಿದ್ದ ಭಯೋತ್ಪಾದಕರ ಜೊತೆ ನಂಟನ್ನು ಹೊಂದಿದ್ದವರು ಎಂದು ಹೇಳಲಾಗಿದೆ. ಇವರ ಬಂಧನಕ್ಕೆ ಮೂರು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿತ್ತು. ಈ ಶಂಕಿತ ಉಗ್ರರ ಜೊತೆ ನಂಟು ಹೊಂದಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ನೀಡಿದ್ದ ರಾಜ್ಯ ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Advertisement
ಜ.8ರ ರಾತ್ರಿ ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್‌ಪೋಸ್ಟ್‌ನಲ್ಲಿ ಸ್ಪೆಷಲ್ ಸಬ್‌ಇನ್ಸ್‌ಪೆಕ್ಟರ್ ವಿಲ್ಸನ್ ಅವರನ್ನು ಗುಂಡಿಟ್ಟು ಕೊಂದು ಈ ಇಬ್ಬರು ಶಂಕಿತ ಉಗ್ರರು ಪರಾರಿಯಾಗಿದ್ದರು. ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತೀವ್ರ ತಪಾಸಣೆಗೆ ಒಳಪಡಿಸಲಾಗಿತ್ತು. ಈ ಮಾರ್ಗದಲ್ಲಿ ಬಂದಿದ್ದ ಮಹೀಂದ್ರ ಸ್ಕಾರ್ಪಿಯೋದಿಂದ ಇಳಿದ ಇಬ್ಬರು ಶಂಕಿತ ಉಗ್ರರು ಗುಂಡು ಹಾರಿಸಿ ವಿಲ್ಸನ್ ಅವರನ್ನು ಹತ್ಯೆಗೈದು ಪರಾರಿಯಾಗಿದ್ದರು.
Advertisement
ಕೇರಳ ಹಾಗೂ ತಮಿಳುನಾಡಿನ ಪೊಲೀಸರ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಹಾಗೂ ಉಡುಪಿ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಡುಪಿ ಪೊಲೀಸರು ಈ ಬಗ್ಗೆ ಯಾವುದೇ ಸ್ಪಷ್ಟನೆ ಮತ್ತು ಮಾಹಿತಿ ನೀಡಿಲ್ಲ.