ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು, ಕರ್ತವ್ಯ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಡಿಆರ್ ನಲ್ಲಿ ಎಎಸ್‍ಐ ಕಾರ್ಯ ನಿರ್ವಹಿಸುತ್ತಿದ್ದ ಮರೀಗೌಡ (56) ಮೃತ ಪೊಲೀಸ್ ಅಧಿಕಾರಿ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಒಂದರ ಹಿಂದೆ ಒಂದು ಬರುತ್ತಿದ್ದ ನಾಲ್ಕು ವಾಹನಗಳು ಡಿಕ್ಕಿ ಹೊಡೆದಿದ್ದವು. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೆ ಹಿಂದಿನಿಂದ ಡಿಕ್ಕಿ – ಸರಣಿ ಅಪಘಾತ
ಅಪಘಾತಕ್ಕೆ ಈಡಾಗಿದ್ದ ಬೆಂಗಾವಲು ವಾಹನದಲ್ಲಿ ಮರೀಗೌಡ ಅವರು ಇದ್ದರು. ಆದರೆ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದಾರೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಾಸಿದ್ದರು. ಮಂಡ್ಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮರೀಗೌಡ ಅವರು ಚಿಕಿತ್ಸೆ ಫಲಕಾರಿಗದೆ ಮೃತಪಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv