ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನಾವೋದಲ್ಲಿ ಶನಿವಾರ ನಡೆದ ಶಂಕಿತ ಉಗ್ರರ ದಾಳಿಯಲ್ಲಿ ಹೆಡ್ ಕಾನ್‍ಸ್ಟೇಬಲ್ ಅಲಿ ಮೊಹಮ್ಮದ್ ಗನಿ ಹತ್ಯೆಯಾಗಿದ್ದಾರೆ.
ಹೆಡ್ ಕಾನ್‍ಸ್ಟೇಬಲ್ ಮೊಹಮ್ಮದ್ ಗನಿ ಅವರನ್ನು ಕುಲ್ಗಾಮ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ದಾಳಿ ವೇಳೆ ಗನಿ ಅವರಿಗೆ ಗುಂಡು ತಗುಲಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೂರು ವಾರಗಳ ಹಿಂದೆ ಕಾಶ್ಮೀರದ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ನೆರೆಮನೆಯಾತನ ಬಂಧನ
ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ:
ಇದೇ ಸಂದರ್ಭದಲ್ಲಿ ಶ್ರೀನಗರದ ಮಹಾರಾಜ್ ಬಜಾರ್ ಪ್ರದೇಶದಲ್ಲಿ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಸದ್ಯ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ
ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಸಿಆರ್‍ಪಿಎಫ್ ತಂಡ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆದಿತ್ತು. ದಾಳಿ ನಡೆದಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.