ಮಂಡ್ಯ: ಸದಾ ಕಾನೂನು ಸುವ್ಯವಸ್ಥೆಯಲ್ಲಿ ಬ್ಯುಸಿ ಆಗಿರುವ ಪೊಲೀಸರು ತಮ್ಮ ಕರ್ತವ್ಯದ ನಡುವೆ ಬಿಡುವು ಮಾಡಿಕೊಂಡು, ಮಹಿಳಾ ಸಿಬ್ಬಂದಿಯೊಬ್ಬರ ಸೀಮಂತ ಕಾರ್ಯವನ್ನು ಪೊಲೀಸ್ ಠಾಣೆಯಲ್ಲಿ ನೆರವೇರಿಸಿ ಸಂಭ್ರಮಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಪೊಲೀಸ್ ಠಾಣೆಯಲ್ಲಿ ಪಿಸಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಲ್ಮಾಭಾನು ಗರ್ಭಿಣಿಯಾಗಿದ್ದು, ಪೊಲೀಸ್ ಠಾಣೆಯಲ್ಲೇ ಸೀಮಂತ ಮಾಡಿ ಸಿಬ್ಬಂದಿ ಗೌರವ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ಠಾಣೆಯಲ್ಲಿಯೇ ಮಹಿಳಾ ಪೇದೆಗೆ ಸೀಮಂತ
ತಮ್ಮ ಒತ್ತಡದ ಕೆಲಸದ ನಡುವೆ ಬಿಡುವು ಮಾಡಿಕೊಂಡು ತಮ್ಮ ಸೀಮಂತ ನೆರವೇರಿಸಿದ ಸಹೋದ್ಯೋಗಿಗಳ ಪ್ರೀತಿಗೆ ಸಲ್ಮಾ ಭಾನು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗರ್ಭಿಣಿ ಸಿಬ್ಬಂದಿಗೆ ಪೊಲೀಸ್ ಠಾಣೆಯಲ್ಲೇ ಸೀಮಂತ
ಈ ಹಿಂದೆ ಮೈಸೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಯೊಬ್ಬರಿಗೆ ಸೀಮಂತ ಶಾಸ್ತ್ರವನ್ನು ಮಾಡಲಾಗಿತ್ತು. ಆದರೆ ಮಡಿಕೇರಿಯಲ್ಲಿ ಮೊದಲ ಬಾರಿಗೆ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಶಿಕ್ಷಕರು ಹಾಗೂ ಸಹಪಾಠಿ ಸೇರಿ ಸೀಮಂತ ಶಾಸ್ತ್ರವನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv