ದಿಸ್ಪುರ್: ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ತರಗತಿ ಹೊರಗೆ ನಿಂತ ಬಾಲಕಿ- ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ದಾಖಲಾತಿ
Advertisement
Mother is a verb. It’s something you do, not just who you are!
Assam Police personnel in Darrang district taking care of the lil’ ones, while their mothers write the TET Exam. pic.twitter.com/u6fIx6hOjb
— Assam Police (@assampolice) November 10, 2019
Advertisement
ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿಯಾಗುವುದು ಒಂದು ಕ್ರಿಯೆ. ನೀವು ಅದನ್ನು ಮಾಡಬೇಕಾಗುತ್ತದೆ. ಅಸ್ಸಾಂ ಪೊಲೀಸರು ದಾರಂಗ್ ಜಿಲ್ಲೆಯಲ್ಲಿ ಈ ಮಕ್ಕಳ ತಾಯಂದಿರು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಹೋಗಿದ್ದರು. ಈ ವೇಳೆ ಅವರವರ ಮಕ್ಕಳನ್ನು ಇಬ್ಬರು ಪೇದೆಗಳು ನೋಡಿಕೊಂಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ
Advertisement
Salute MAM!! U r SUPER MOM!! ????out of ????
— Santanu Ghatak (@SantanuGhatak4) November 11, 2019
Advertisement
ನವೆಂಬರ್ 10ರಂದು ಅಸ್ಸಾಂನಲ್ಲಿ ಈ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಶಿಕ್ಷಕರು ಮೊದಲನೇ ತರಗತಿಯಿಂದ 8ನೇ ತರಗತಿವರೆಗೂ ಕಲಿಸಲು ಅರ್ಹರಾಗುತ್ತಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಹಲವು ಮಂದಿ ಪೇದೆಗಳನ್ನು ಹೊಗಳಿದ್ದಾರೆ. ಕೆಲವರು ‘ಸೆಲ್ಯೂಟ್’ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೆ ಕೆಲವರು ‘ಸೆಲ್ಯೂಟ್ ಮ್ಯಾಮ್. ನೀವು ಸೂಪರ್ ಮೇಡಂ’ ಎಂದು ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.