ಕೊಪ್ಪಳ: ವಿದೇಶಿ ಮಹಿಳೆ ಹಾಗೂ ಹೋಂ ಸ್ಟೇ ಮಾಲೀಕೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಇದೀಗ ಗಂಗಾವತಿ (Gangavathi) ಸುತ್ತಮುತ್ತಲಿನ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ಮೇಲೆ ದಾಳಿ ಮಾಡಿದೆ.ಇದನ್ನೂ ಓದಿ: ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಗಂಗಾವತಿ ಸಮೀಪದ ಸಾಣಾಪುರದ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಮೂವರು ದುಷ್ಕರ್ಮಿಗಳು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು. ಜೊತೆಗೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ರೆಸಾರ್ಟ್‌ಗಳ ಮೇಲೆ ದಾಳಿ ನಡೆಸಿ, ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.
ರೆಸಾರ್ಟ್‌ಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿವೆ ಹಾಗೂ ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕೊಪ್ಪಳ ಎಸ್ಪಿ ಡಾ.ರಾಮ್ ಅರಸಿದ್ದಿ ರಾತೋರಾತ್ರಿ ದಿಢೀರನೆ ದಾಳಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬಸ್ಸಾಪುರ, ಗಂಗಾವತಿ ತಾಲೂಕಿನ ಸಾಣಾಪುರ ಸುತ್ತಮುತ್ತಲಿನ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ಮೇಲೆ ಖುದ್ದು ದಾಳಿ ನಡೆಸಿ, ದಾಖಲಾತಿಗಳ ನಿರ್ವಹಣೆ, ಮದ್ಯ, ಮಾದಕ ವಸ್ತುಗಳ ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಅಕ್ರಮ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಗೆದ್ದು ತವರಿಗೆ ಬಂದ ಕ್ಯಾಪ್ಟನ್ ರೋಹಿತ್‌ಗೆ ಭರ್ಜರಿ ಸ್ವಾಗತ