ಬೆಂಗಳೂರು: ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಇದನ್ನೂ ಓದಿ: ಡಿಸಿಎಂ ಆಗಮನದ ಬಂದೋಬಸ್ತಿಗೆ ಬಿಸಿಲಲ್ಲಿ ನಿಂತ ತುಂಬು ಗರ್ಭಿಣಿ ಪೇದೆ!
Advertisement
Advertisement
ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ ಒತ್ತಡ ಜಾಸ್ತಿ ಇರುತ್ತೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಲು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಿರೋದು ನಿಜಕ್ಕೂ ಹೆಮ್ಮೆಪಡುವ ವಿಚಾರ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
Advertisement
ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಒತ್ತಡದ ಮಧ್ಯೆ ಕೆಲಸ ಮಾಡುವ ಸನ್ನಿವೇಶಗಳು ಆಗಾಗ ಬೆಳಕಿಗೆ ಬರುತ್ತಿದ್ದವು. ಕಳೆದ ಬಾರಿ ಮಂಗಳೂರಿನಲ್ಲಿ ಗರ್ಭಿಣಿ ಮಹಿಳಾ ಪೊಲೀಸ್ ರೊಬ್ಬರನ್ನ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದರು. ಉರಿ ಬಿಸಿಲಲ್ಲಿ ಗರ್ಭಿಣಿ ಮಹಿಳೆಯನ್ನ ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದಕ್ಕೆ ಎಲ್ಲೆಡೆ ಟೀಕೆಗಳು ಕೇಳಿಬಂದು ಪೊಲೀಸ್ ಅಧಿಕಾರಿಗಳು ಕ್ಷಮೆ ಕೇಳಿದ್ದರು.