– ಇನ್ನೇನು ಮಾಡೋದು ಬಿಜೆಪಿ ಹಣೆಬರಹ ಅಷ್ಟೇ
ಬೆಳಗಾವಿ: ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನ ಗ್ಯಾಂಗ್‍ರೇಪ್ ಆರೋಪಿಗಳ ಬಂಧನ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ
ಒಂದೊಂದು ಪೊಲೀಸ್ ಠಾಣೆಯಲ್ಲಿ ಹತ್ತತ್ತು ಸಿಬ್ಬಂದಿ ಕೊರತೆ ಇದೆ. ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಯಾರಿಗೆ ಏನೇ ಆದರೂ ಪೊಲೀಸರು ಬರಲೇಬೇಕು. ಅವರು ಬೆಳಗ್ಗೆಯಿಂದ ರಾತ್ರಿಯವರೆಗೂ ಒತ್ತಡದಲ್ಲಿ ಕೆಲಸ ಮಾಡ್ತಾರೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಸಮಗ್ರ ಬದಲಾವಣೆ ಆಗಬೇಕು ಎಂದು ಪೊಲೀಸರ ಪರವಾಗಿ ನಿಂತಿದ್ದಾರೆ.ಇದನ್ನೂ ಓದಿ:ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಶವವಾಗಿ ಪತ್ತೆ
ನಮ್ಮಲ್ಲಿ ಯಾವುದೇ ಹೊಸ ತಂತ್ರಜ್ಞಾನವಿಲ್ಲ, ನಾವು ಇನ್ನೂ ಹಳೆಯ ವ್ಯವಸ್ಥೆಯಲ್ಲಿ ಇದ್ದೇವೆ. ಸಮಗ್ರವಾಗಿ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಹೊಯ್ಸಳ ಹೋಯ್ತು, ಗರುಡ ಹೋಯ್ತು ಈಗ 112 ಟೀಮ್ ಬಂದಿದೆ. ವಾಹನ ಬದಲಾಗುವುದು ಮಾತ್ರವಲ್ಲ ವ್ಯವಸ್ಥೆಯೂ ಬದಲಾಗಬೇಕು. ಎಲ್ಲ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಆಗಬೇಕು ಎಂದು ಸಿಎಂಗೆ ಆಗ್ರಹಿಸಿದ್ದಾರೆ.
ಗೃಹಸಚಿವ ಅರಗ ಜ್ಞಾನೇಂದ್ರ ರೇಪ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಹಿಂದಿನಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಇನ್ನೇನು ಮಾಡೋದು ಅವರ ಹಣೆಬರಹ ಅಷ್ಟೇ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅದರ ಬಗ್ಗೆ ಏನೇನೋ ಹೇಳಿಕೊಳ್ಳುತ್ತಾರೆ. ಮಂತ್ರಿಗಳ ಈ ರೀತಿ ಹೇಳಿಕೆಯಿಂದ ಅವರಿಗೆ ವ್ಯತಿರಿಕ್ತ ಆಗೋ ಸಾಧ್ಯತೆ ಇದೆ. ಕೇಂದ್ರ ಸಚಿವರು, ರಾಜ್ಯದ ಸಚಿವರು ಸಾಕಷ್ಟು ಬಾರಿ ಈ ಕುರಿತು ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.